ಕಾಸರಗೋಡು: ಕಾಸರಗೋಡಿನಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಿರ್ಮಿಸಿರುವ ಮನೆಗಳ ದುಸ್ಥಿತಿಗೆ ಹೈಕೋರ್ಟ್ ಮಧ್ಯಪ್ರವೇಶಿಸಿದೆ. ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರು ವಿxಯ ತುಂಬಾ ಗಂಭೀರವಾಗಿದೆ ಎಂದು ಆಡಳಿತ ಯಂತ್ರವನ್ನು ಟೀಕಿಸಿರುವರು.
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ, ಮನೆಗಳ ಪ್ರಸ್ತುತ ಸ್ಥಿತಿಗತಿಯನ್ನು ಪರಿಶೀಲಿಸಿ ಸ್ವಾಧೀನಪಡಿಸಿಕೊಳ್ಳಬಹುದೇ ಎಂದು ತಿಳಿಸಲು ಹಾಗೂ ಇಲ್ಲದಿದ್ದಲ್ಲಿ ಕಾರಣಗಳನ್ನು ವಿವರಿಸುವಂತೆ ನ್ಯಾಯಾಲಯ ಸೂಚಿಸಿದೆ.
ಸತ್ಯಸಾಯಿ ಅನಾಥಾಶ್ರಮ ಟ್ರಸ್ಟ್ ಸಲ್ಲಿಸಿರುವ ಅರ್ಜಿಯನ್ನು ಆಧರಿಸಿ ನ್ಯಾಯಾಲಯದ ಕ್ರಮ ಕೈಗೊಳ್ಳಲಾಗಿದೆ. ನಿರ್ಮಿಸಿರುವ 81 ಮನೆಗಳಲ್ಲಿ ಹಲವು ಶಿಥಿಲಗೊಂಡಿದ್ದು, ಮನೆಗಳನ್ನು ವಾಸಯೋಗ್ಯವಾಗಿಸಲು ಸುಮಾರು 24 ಲಕ್ಷ ರೂಪಾಯಿ ಬೇಕಾಗುತ್ತದೆ ಎಂದು ಅರ್ಜಿದಾರರು ತಿಳಿಸಿದ್ದರು.