ಬದಿಯಡ್ಕ: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಮಲಬಾರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎಂ.ಆರ್. ಮುರಳಿ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಸರ್ಕಾರದಿಂದ ಲಭಿಸುವ ಅನುದಾನವನ್ನು ಒದಗಿಸಿಕೊಡಲಾಗುವುದು ಎಂಬ ಭರವಸೆಯನ್ನೂ ನೀಡಿದರು. ಈ ಸಂದಭರ್Àದಲ್ಲಿ ಕಣಿಪುರ ಗೋಪಾಲಕೃಷ್ಣ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಕುಮಾರ್, ಅನಂತಪುರ ಕ್ಷೇತ್ರದ ಆಡಳಿತ ಮೊಕ್ತೇಸರ ಉದಯಕುಮಾರ್, ಕಾರ್ಮಾರು ಕ್ಷೇತ್ರ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕುಂಜ, ಕ್ಷೇತ್ರ ಆಡಳಿತ ಸಮಿತಿಯ ಟ್ರಸ್ಟಿಗಳಾದ ಗೋಪಾಲ ಭಟ್ ಪಟ್ಟಾಜೆ, ರಾಧಾಕೃಷ್ಣ ರೈ ಕಾರ್ಮಾರು, ಸೇವಾಸಮಿತಿ ಅಧ್ಯಕ್ಷ ಶ್ರೀಕೃಷ್ಣ ಭಟ್ ಪುದುಕೋಳಿ, ನವೀನ್ ಚಂದ್ರ, ಮಹಿಳಾ ವೃಂದದ ಅಧ್ಯಕ್ಷ ಜ್ಯೋತಿ ಕಾರ್ಮಾರು ಸಹಿತ ವಿವಿಧ ಸಮಿತಿಯ ಸದಸ್ಯರುಗಳು ಹಾಗೂ ಭಕ್ತವೃಂದದವರು ಉಪಸ್ಥಿತರಿದ್ದರು.