ಚುರಾಚಂದ್‌ಪುರ: ಮಣಿಪುರದ ಚುರಾಚಂದ್‌ಪುರ ಜಿಲ್ಲೆಯ ಚಿಂಗ್‌ಫೀ ಬಂಕರ್ ನಂ.1ರಲ್ಲಿ ಬುಧವಾರ ಕರ್ತವ್ಯ ನಿರತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ 1 ರಿಂದ 1.30 ರ ನಡುವೆ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಒಂಖೋಮಾಂಗ್ ಅವರ ತಲೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಗುಂಡಿನ ದಾಳಿಯಲ್ಲಿ ಇನ್ನೂ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಆದರೆ ಅವರ ವಿವರಗಳನ್ನು ಇನ್ನೂ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಆದಿವಾಸಿಗಳನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಮಾರನೇ ದಿನ ಈ ದಾಳಿ ನಡೆದಿದೆ.
ಮಣಿಪುರದಲ್ಲಿ ಮೇ 3 ರಂದು ಆರಂಭವಾದ ಜನಾಂಗೀಯ ಹಿಂಸಾಚಾರದಲ್ಲಿ 180 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನ ಗಾಯಗೊಂಡಿದ್ದಾರೆ.