ಪಟ್ನಾ: 'ಇಂಡಿಯಾ' ಮೈತ್ರಿಕೂಟವು ಮಹಾತ್ಮ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ಆಕ್ಟೋಬರ್ 2ರಂದು ದೇಶದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಹೇಳಿದ್ದಾರೆ.
ಪಟ್ನಾ: 'ಇಂಡಿಯಾ' ಮೈತ್ರಿಕೂಟವು ಮಹಾತ್ಮ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ಆಕ್ಟೋಬರ್ 2ರಂದು ದೇಶದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಹೇಳಿದ್ದಾರೆ.
ಮುಂಬೈನಲ್ಲಿ ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1ರಂದು ನಡೆದ 'ಇಂಡಿಯಾ' ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದಿರುವ ನಿತೀಶ್, ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಮಹಾತ್ಮ ಗಾಂಧಿ ಅವರ ಜನ್ಮದಿನವನ್ನು ದೇಶದಾದ್ಯಂತ ಆಚರಿಸುವ ನಿರ್ಣಯವನ್ನು 'ಇಂಡಿಯಾ' ಒಕ್ಕೂಟ ಕೈಗೊಂಡಿದೆ. ವಿರೋಧ ಪಕ್ಷಗಳ ಮೈತ್ರಿಕೂಟವು ಬಿಜೆಪಿ ಆಡಳಿತವನ್ನು ಕಂಗೆಡಿಸಿದೆ. ಹೀಗಾಗಿ ಕೇಂದ್ರ ಸರ್ಕಾರವು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ' ಎಂದು ಆರೋಪಿಸಿದ್ದಾರೆ.
ಜೆಡಿ(ಯು) ಪಕ್ಷದ ಮುಖ್ಯಸ್ಥರೂ ಆಗಿರುವ ನಿತೀಶ್, ವಿರೋಧ ಪಕ್ಷಗಳ ಒಗ್ಗಟ್ಟನ್ನು ಕಂಡು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗಾಬರಿಗೊಂಡಿದೆ. ಹಾಗಾಗಿ ಕೇಂದ್ರ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಿದೆ. ಅದರೆ ಉದ್ದೇಶವೇನು ಎಂಬುದನ್ನು ವಿವರಿಸಿಲ್ಲ ಎಂದು ಟೀಕಿಸಿದ್ದಾರೆ.