ಕಾಸರಗೋಡು: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಗಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಪ್ರವಾಸೋದ್ಯಮ ದಿನಾಚರಣೆ ಹಾಗೂ ರೀಲ್ಸ್ ಸ್ಪರ್ಧೆಯನ್ನು ಜಿಲ್ಲಾಧಿಕಾರಿ ಕೆ.ಇನ್‍ಬಾಶೇಖರ್ ಉದ್ಘಾಟಿಸಿದರು. ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬೆಳಕಿಗೆ ಬಾರದ ಕೆಲವೊಂದು ಪ್ರವಾಸಿತಾಣಗಳನ್ನು ಹೊರಜಗತ್ತಿಗೆ ತಿಳಿಸಬೇಕಾದ ಅನಿವಾರ್ಯತೆಯಿದೆ. ಇದಕ್ಕಾಗಿ ಪ್ರತ್ಯೇಕ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕಾಗಿದೆ. ನಮ್ಮ ನಾಡಿನ ಪರಂಪರೆ, ಸೊಬಗನ್ನು ಅನಾವರಣಗೊಳಿಸುವುದರಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭಿವೃದಿಕಾಣಲು ಸಾಧ್ಯ. ಇದರಿಂದ ಹಲವಾರು ಜನರಿಗೆ ಉದ್ಯೋಗ ನೀಡಬಹುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯªದ್ದಿಲಾಖೆ ಉಪನಿರ್ದೇಶಕ ಎಂ.ಹುಸೇನ್, ಕೇಂದ್ರೀಯ ವಿಶ್ವವಿದ್ಯಾಲಯದ ಪ್ರವಾಸೋದ್ಯಮ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಬಿನೋಯ್, ಡಿಟಿಪಿಸಿ ಕಾರ್ಯದರ್ಶಿ ಲಿಜೋ ಜೋಸೆಫ್ ಉಪಸ್ಥಿತರಿದ್ದರು. ಈ ಸಂದರ್ಭ ಜಿಲ್ಲೆಯ ಸಾಮಾಜಿಕ ಜಾಲತಾಣದ ಪ್ರಭಾವಿಗಳು ಕೇಂದ್ರೀಯ ವಿಶ್ವವಿದ್ಯಾಲಯದ ಪ್ರವಾಸೋದ್ಯಮ ವಿಭಾಗದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬೇಕಲ್ ಟೂರಿಸಂ ಫ್ರೆಟರ್ನಿಟಿ ಪ್ರತಿನಿಧಿ ಸೈಫುದ್ದೀನ್ ಕಳನಾಡ್ ಮತ್ತು ಟ್ರಾವೆಲ್ ಏಜೆಂಟ್ಸ್ ಪ್ರತಿನಿಧಿ ಅಬ್ದುಲ್ ಫವಾಝ್ ಪಾಲ್ಗೊಂಡಿದ್ದರು.
ಜಿಲ್ಲೆಯ ಪ್ರಸಿದ್ಧ ಮತ್ತು ಗಮನಾರ್ಹ ಪ್ರವಾಸೋದ್ಯಮ ಸ್ಥಳಗಳನ್ನು ಬೆಳಕಿಗೆ ತರುವ ಉದ್ದೇಶದಿಂದ ಜಿಲ್ಲಾ ಪ್ರವಾಸೋದ್ಯಮ ಪ್ರಮೋಷನ್ ಕೌನ್ಸಿಲ್ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸುತ್ತದೆ.