ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ-ಯುಜಿ) ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶ ಪರೀಕ್ಷೆ (ಸಿಯುಇಟಿ-ಪಿಜಿ) ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳ (ಎನ್‌ಇಟಿ) ದಿನಾಂಕವನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಂಗಳವಾರ ಘೋಷಿಸಿದೆ.
2024-25ನೇ ಶೈಕ್ಷಣಿಕ ವರ್ಷದ ಸಿಯುಇಟಿ -ಯುಜಿ ಪರೀಕ್ಷೆಯು ಮೇ 15ರಿಂದ 31ರವರೆಗೆ ನಡೆಯಲಿದೆ. ಕೊನೆಯ ಪರೀಕ್ಷೆ ನಡೆದ ನಂತರದ ಮೂರು ವಾರಗಳ ಒಳಗಾಗಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಯುಜಿಸಿ ಮುಖ್ಯಸ್ಥ ಎಂ.ಜಗದೀಶ್ ಕುಮಾರ್ ತಿಳಿಸಿದ್ದಾರೆ.
ಸಿಯುಇಟಿ-ಪಿಜಿ ಪರೀಕ್ಷೆಯು ಮಾರ್ಚ್ 11ರಿಂದ 28ರವರೆಗೆ ನಡೆಯಲಿದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯು ಜೂನ್ 10ರಿಂದ 21ರವರೆಗೆ ನಡೆಯಲಿದೆ ಎಂದು ತಿಳಿಸಿದರು.