ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಸುಬ್ರಹ್ಮಣ್ಯ ವೆಂಕಟ್ರಮಣ ಭಟ್(ಎಸ್.ವಿ ಭಟ್)ಅವರ ಅಂತಿಮ ಸಂಸ್ಕಾರ ಸೋಮವಾರ ಕಾಸರಗೋಡು ಪಳ್ಳಂನ ಸಾರ್ವಜನಿಕ ಸ್ಮಶಾನದಲ್ಲಿ ನೆರವೇರಿತು.
ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ, ದ.ಕ ಜಿಲ್ಲಾ ಕ.ಸಾ.ಪ ಅಧ್ಯಕ್ಷ ಎಂ. ಪಿ. ಶ್ರೀನಾಥ್, ತಾಲೂಕು ಘಟಕ ಅಧ್ಯಕ್ಷ ಡಾ. ಮುರಳೀಮೋಹನ ಚೂಂತಾರು, ಕ್ಯಾಂಪ್ಕೋ ನಿರ್ದೇಶಕ ಡಾ. ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿ, ಜಿಲ್ಲೆಯ ನಾನಾ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ನೂರಾರು ಮಂದಿ ಅಂತಿಮ ದರ್ಶನ ಪಡೆದರು.
ಇಂದು ಶ್ರದ್ಧಾಂಜಲಿ ಸಭೆ:
ಕಸಾಪ ಕೇರಳ ಗಡಿನಾಡ ಘಟಕ ಅಧ್ಯಕ್ಷ ಎಸ್.ವಿ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆ ಸೆ. 12ರಂದು ಸಂಜೆ 4ಕ್ಕೆ ಕಾಸರಗೋಡು ಬ್ಯಾಂಕ್ ರಸ್ತೆಯ ಪೊಲೀಸ್ ಠಾಣೆ ಸನಿಹದ ಕನ್ನಡ ಸಾಹಿತ್ಯ ಪರಿಷತ್ ಕೇರಳ ಘಟಕ ಕಚೇರಿಯಲ್ಲಿ ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.