ಮಧೂರು : ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಮಧೂರು ಗ್ರಾ.ಪಂ.ಗೆ ಭೇಟಿ ನೀಡಿದರು. ಗ್ರಾಮ ಪಂಚಾಯಿತಿಯ ಕಾರ್ಯಚಟುವಟಿಕೆಗಳು ಮತ್ತು ಯೋಜನೆಗಳ ಕುರಿತು ಪಂಚಾಯಿತಿ ಆಡಳಿತ ಸಮಿತಿಯೊಂದಿಗೆ ಜಿಲ್ಲಾಧಿಕಾರಿ ಸಮಾಲೋಚನೆ ನಡೆಸಿದರು.
ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ, ಉಪಾಧ್ಯಕ್ಷೆ ಸ್ಮಿಜಾ ವಿನೋದ್, ಸ್ಥಾಯಿ ಸಮಿತಿ ಅಧ್ಯಕ್ಷರು, ಗ್ರಾಮ ಪಂಚಯಿತಿ ಸದಸ್ಯರು, ಪಂಚಾಯಿತಿ ಅಧಿಕಾರಿಗಳು, ಹಸಿರು ಕ್ರಿಯಾ ಸೇನೆ ಹಾಗೂ ಕುಟುಂಬಶ್ರೀ ಪ್ರತಿನಿಧಿಗಳು ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಪಂಚಾಯಿತಿಯ ವಿವಿಧ ವಾರ್ಡುಗಳ ಸಮಸ್ಯೆಗಳ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನೀಡಿದ ದೂರುಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಚರ್ಚೆಯಲ್ಲಿ ಭರವಸೆ ನೀಡಿದರು.