ಕುಂಬಳೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ವಿವಿಧ ಕಾರ್ಯಕ್ರಮಗಳು ಜರಗಿತು. ಬೆಳಗ್ಗೆ ಶಾಲೆಯ ಸಭಾಂಗಣದಲ್ಲಿ ಮುದ್ದುಕೃಷ್ಣ ವೇಷ ಪ್ರದರ್ಶನ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಸಭಾಕಾರ್ಯಕ್ರಮದಲ್ಲಿ ವಿದ್ಯಾಲಯದ ಆಡಳಿತ ಮಂಡಳಿ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಆಗಮಿಸಿದ ಚಲನಚಿತ್ರ ಹಾಗೂ ಜಾಹೀರಾತು ನಟ ದಿನೇಶ್ ಹೆಬ್ಬಾರ್ ಅಧಿಕಾರಿಮನೆ ಮುಜುಂಗಾವು ಇವರು ತಮ್ಮ ಅನುಭವದೊಂದಿಗೆ ವಿದ್ಯಾರ್ಥಿಗಳಿಗೆ ಹಿತವಚನವನ್ನು ನೀಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ ಮಾತನಾಡಿದರು. ಮುಖ್ಯೋಪಾಧ್ಯಾಯ ಶ್ಯಾಂಭಟ್ ದರ್ಭೆಮಾರ್ಗ, ಸಹ ಮುಖ್ಯೋಪಾಧ್ಯಾಯಿನಿ ಚಿತ್ರಾ ಸರಸ್ವತಿ ಪೆರಡಾನ ಉಪಸ್ಥಿತರಿದ್ದರು. ಅಧ್ಯಾಪಕ, ಅಧ್ಯಾಪಿಕೆಯರು ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಮುದ್ದುಕೃಷ್ಣ ವೇಷ ಪ್ರದರ್ಶಿಸಿದ ಹಾಗೂ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.