HEALTH TIPS

ನನ್ನ ವಿರುದ್ಧ ದಾಖಲಾದ ಪ್ರಕರಣಗಳನ್ನು ಕಾನೂನುಬದ್ಧವಾಗಿ ಎದುರಿಸುವೆ: ಉದಯನಿಧಿ

                ಚೆನ್ನೈ: ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್‌ ಈಗ ನೇರವಾಗಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

               ಕೇಸರಿ ಪಕ್ಷದ ನಾಯಕರು ನನ್ನ ಹೇಳಿಕೆಗಳನ್ನು ತಿರುಚುತ್ತಿದ್ದಾರೆ ಎಂದು ದೂರಿದ ಅವರು, ನನ್ನ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಕಾನೂನುಬದ್ಧವಾಗಿ ಎದುರಿಸಿಲು ಸಿದ್ಧ ಎಂದಿದ್ದಾರೆ.

               ಜಗತ್ತನ್ನೇ ತಿರುಗುವ ಪ್ರಧಾನಿ ಮೋದಿ ಅವರು ಮಣಿಪುರ ಹಿಂಸಾಚಾರದ ಕುರಿತು ಪ್ರಶ್ನೆಗಳನ್ನು ಎದುರಿಸಲು ಭಯಪಡುತ್ತಾರೆ ಎನ್ನುವ ಮೂಲಕ ಪ್ರಧಾನಿ ವಿರುದ್ಧ ಉದಯನಿಧಿ ವಾಗ್ದಾಳಿ ನಡೆಸಿದ್ದಾರೆ.

                 'ಕಳೆದ 9 ವರ್ಷಗಳಿಂದ, ನೀವು ನೀಡಿದ (ಬಿಜೆಪಿ) ಭರವಸೆಗಳೆಲ್ಲವೂ ಪೊಳ್ಳಾಗಿವೆ. ನಮ್ಮ ಕಲ್ಯಾಣಕ್ಕಾಗಿ ನೀವು ಏನು ಮಾಡಿದ್ದೀರಿ ಎಂಬುದು ಬಲಪಂಥೀಯ ಬಿಜೆಪಿ ಸರ್ಕಾರದ ವಿರುದ್ಧ ಇಡೀ ದೇಶವು ಒಗ್ಗಟ್ಟಿನಿಂದ ಎತ್ತುತ್ತಿರುವ ಪ್ರಶ್ನೆಯಾಗಿದೆ. ‌ಟಿಎನ್‌ಪಿಡಬ್ಲ್ಯೂಎಎ (Tamil Nadu Progressive Writers Artists Association) ಸಮಾವೇಶದಲ್ಲಿ ನನ್ನ ಭಾಷಣವನ್ನು 'ಜನಾಂಗೀಯ ಹತ್ಯೆಗೆ ಪ್ರಚೋದನೆ' ಎಂದು ಬಿಜೆಪಿ ನಾಯಕರು ತಿರುಚಿದ್ದಾರೆ. ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಅಸ್ತ್ರವೆಂದು ಪರಿಗಣಿಸಿದ್ದಾರೆ' ಎಂದು ಹೇಳಿದ್ದಾರೆ.

                  'ಆಶ್ಚರ್ಯಕರ ಸಂಗತಿಯೆಂದರೆ, ನಕಲಿ ಸುದ್ದಿಗಳ ಹರಡುತ್ತಿರುವ ಬಗ್ಗೆ ಮೋದಿ ಮತ್ತು ಅವರೊಂದಿಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಲವರು ಒತ್ತಾಯಿಸುತ್ತಿದ್ದಾರೆ. ಗೌರವಾನ್ವಿತ ಸ್ಥಾನದಲ್ಲಿದ್ದು ಅಪಪ್ರಚಾರ ಮಾಡುತ್ತಿರುವುದಕ್ಕೆ ನಾನೇ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು, ಆದರೆ ನಾನು ಹಾಗೆ ಮಾಡುವುದಿಲ್ಲ, ಏಕೆಂದರೆ ಅದು ಬದುಕುವ ವಿಧಾನವಲ್ಲ. ಅದರ ಅರಿವು ನನಗಿದೆ, ಅವರಿಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries