ಕಾಸರಗೋಡು: ಪೊಲೀಸರ ಮೇಲೆ ಹಲ್ಲೆ ನಡೆಸಿ, ಬಂಧಿತನಾಗಿ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ, ಮುಸ್ಲಿಂ ಯೂತ್‍ಲೀಗ್ ಮುಖಮಡ ಉಪ್ಪಳದ ಗೋಲ್ಡನ್ ಅಬ್ದುಲ್ ರಹಮಾನ್ ಮೇಲೆ ವೈದ್ಯರು ಹಾಗೂ ಆಸ್ಪತ್ರೆ ಸಇಬ್ಬಂದಿಗೆ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಮಂಗಲ್ಪಾಡಿ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪ್ರಣವ್‍ಲಾಲ್ ಅವರ ದೂರಿನ ಮೇರೆಗೆ ಈ ಕೇಸು. ಸೆ. 19ರಂದು ಗೋಲ್ಡನ್ ಅಬ್ದುಲ್ ರಹಮಾನ್ ಮಗುವನ್ನು ಚಇಕಿತ್ಸೆಗಾಘಿ ಆಸ್ಪತ್ರೆಗೆ ಕರೆತಂದಿದ್ದು, ಈ ಸಂದರ್ಭ ವೈದ್ಯರು ಸೂಚಿಸಿದ ಔಷಧ ಫಾರ್ಮಸಿಯಲ್ಲಿ ಲಭ್ಯವಾಗದ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿದ್ದರು. ಈ ಸಂದರ್ಭ ಮಧ್ಯ ಪ್ರವೇಶಿಸಿದ ವೈದ್ಯಾಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿರುವುದಲ್ಲದೆ, ಬೆದರಿಕೆಯೊಡ್ಡಿದ್ದಾರೆನ್ನಲಾಗಿದೆ. ಬಗ್ಗೆ ವೈದ್ಯಾಧಿಕಾರಿ ಡಾ. ಪ್ರಣವ್‍ಲಾಲ್ ಮಂಜೇಶ್ವರ ಠಾಣೆಗೆ ದೂರು ನೀಡಿದ್ದರು. ವಾರಗಳ ಹಿಂದೆ ಮಂಜೇಶ್ವರ ಠಾಣೆ ಎಸ್.ಐ ಹಾಗೂ ಸಿವಿಲ್ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಗೋಲ್ಡನ್ ಅಬ್ದುಲ್ ರಹಮಾನ್ ವಾರದ ಹಿಂದೆಯಷ್ಟೆ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಹೊರ ಬಂದಿದ್ದರು.