ರಾಯಪುರ: ಕಲ್ಲಿದ್ದಲಿಗೆ ಸಂಬಂಧಿಸಿದಂತೆ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರು ಸೇರಿದಂತೆ ಇತರ ಏಳು ಜನರಿಗೆ ಛತ್ತೀಸ್‌ಗಢದ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದೆ.
ಅಕ್ಟೋಬರ್ 25ರ ಒಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.
ಈ ಪ್ರಕರಣದಲ್ಲಿ 25ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ. ಇವರಲ್ಲಿ 11 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ಉಳಿದವರ ವಿಚಾರಣೆ ನಡೆಯಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರಾದ ದೇವೇಂದ್ರ ಸಿಂಗ್ ಯಾದವ್ ಮತ್ತು ಚಂದ್ರದೇವ್ ಪ್ರಸಾದ್ ರಾಯ್ ಮತ್ತು ಐಎಎಸ್ ಅಧಿಕಾರಿ ರಾನು ಸಾಹು ಸೇರಿದಂತೆ 11 ಜನರನ್ನು ಆರೋಪಿಗಳೆಂದು ಹೆಸರಿಸಿ ಜಾರಿ ನಿರ್ದೇಶನಾಲಯ (ಇ.ಡಿ) ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.