ತಿರುವನಂತಪುರಂ: ರಾಜ್ಯದಲ್ಲಿ ಇನ್ನೂ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಸೆಪ್ಟೆಂಬರ್ 8 ರಿಂದ 11 ರವರೆಗೆ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ನಿನ್ನೆ ಸಂಜೆ ವೇಳೆಗೆ ಕೇರಳದ ಎಲ್ಲಾ 14 ಜಿಲ್ಲೆಗಳ ಬಹುತೇಕೆಡೆಗಳಲ್ಲಿ ಲಘು ಮಳೆಯಾಗಿದೆ. ಇಂದು 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಹೊರತುಪಡಿಸಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೇರಳ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ.