ಮುಂಬೈ: ಕೆನರಾ ಬ್ಯಾಂಕ್‌ನ ₹ 538 ಕೋಟಿ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಸ್ಥಾಪಕ ನರೇಶ್ ಗೋಯಲ್ ಅವರನ್ನು ಶುಕ್ರವಾರ ತಡರಾತ್ರಿ ಬಂಧಿಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ: ಕೆನರಾ ಬ್ಯಾಂಕ್‌ನ ₹ 538 ಕೋಟಿ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಸ್ಥಾಪಕ ನರೇಶ್ ಗೋಯಲ್ ಅವರನ್ನು ಶುಕ್ರವಾರ ತಡರಾತ್ರಿ ಬಂಧಿಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.
ಪಿಎಂಎಲ್‌ಎ ಕಾಯ್ದೆಯಡಿ ಅವರನ್ನು ವಶಕ್ಕೆ ಪಡೆದು ಸುದೀರ್ಘ ಅವಧಿಗೆ ವಿಚಾರಣೆಗೆ ಒಳಪಡಿಸಲಾಗಿತ್ತು.
ಗೋಯಲ್, ಅವರ ಪತ್ನಿ ಅನಿತಾ, ಹಾಗೂ ಕಂಪನಿ ಕೆಲ ಮಾಜಿ ಸಿಬ್ಬಂದಿಯ ವಿರುದ್ಧ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬಿಐ ಮೊಕದ್ದಮೆಯನ್ನು ದಾಖಲಿಸಿತ್ತು. ಬ್ಯಾಂಕ್ ಈ ಸಂಬಂಧ ದೂರು ದಾಖಲಿಸಿತ್ತು.
ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್ ಸಂಸ್ಥೆಯು ಬ್ಯಾಂಕ್‌ನಿಂದ ಒಟ್ಟು 848.86 ಕೋಟಿ ಸಾಲ ಪಡೆದಿದ್ದು, ಈ ಪೈಕಿ ಇನ್ನೂ 538.62 ಕೋಟಿ ಬಾಕಿ ಉಳಿದಿದೆ ಎಂದು ತಿಳಿಸಿತ್ತು. ಇದನ್ನು ವಂಚನೆ ಖಾತೆಯಾಗಿ ಜುಲೈ 29, 2011ರಲ್ಲಿ ಸಿಬಿಐ ಘೋಷಿಸಿತ್ತು.