ನವದೆಹಲಿ: ಕ್ರಿಮಿನಲ್ ಪ್ರಕರಣಗಳಿರುವ ಸಂಸದರ ಪೈಕಿ ಕೇರಳ ಮೊದಲ ಸ್ಥಾನದಲ್ಲಿದೆ. ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯ ಪ್ರಕಾರ, ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಅತಿ ಹೆಚ್ಚು ಸಂಸದರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಅಗ್ರಸ್ಥಾನದಲ್ಲಿದೆ.
ತಮ್ಮ ಅಫಿಡವಿಟ್‍ಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಬಹಿರಂಗಪಡಿಸಿದ ಸಂಸತ್ತಿನ ಸದಸ್ಯರ ಪಟ್ಟಿಯಲ್ಲಿ ಕೇರಳ ಮತ್ತು ಬಿಹಾರದಲ್ಲಿ 73% ರಷ್ಟು ಸಂಸದರಿದ್ದು ಬಿಹಾರಕ್ಕಿಂರ ಕೆಲವು ಫಾಯಿಂಟ್ ಕೇರಳ ಮುಂದಿದೆ, ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ 57% ಮತ್ತು ತೆಲಂಗಾಣ 50% ರಷ್ಟಿದೆ. 306 ಸದಸ್ಯರಲ್ಲಿ 194 ಮಂದಿ ಕೊಲೆ, ಕೊಲೆ ಯತ್ನ, ಅಪಹರಣ, ಮಹಿಳೆಯರ ವಿರುದ್ಧದ ಅಪರಾಧಗಳಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ.