ಮುಂಬೈ: ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಶಾನವಾಜ್ ಹುಸೇನ್ ಅವರಿಗೆ ಮಂಗಳವಾರ ಹೃದಯಾಘಾತವಾಗಿದ್ದು, ಇಲ್ಲಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈ: ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಶಾನವಾಜ್ ಹುಸೇನ್ ಅವರಿಗೆ ಮಂಗಳವಾರ ಹೃದಯಾಘಾತವಾಗಿದ್ದು, ಇಲ್ಲಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯ ಡಾ.ಜಲೀಲ್ ಪರ‍್ಕರ್ ಮೇಲ್ವಿಚಾರಣೆಯಲ್ಲಿ ಹುಸೇನ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ.
ಹುಸೇನ್ ಬಿಹಾರದ ಪ್ರಮುಖ ಬಿಜೆಪಿ ನಾಯಕರಲ್ಲಿ ಒಬ್ಬರು. ಆ ರಾಜ್ಯದಲ್ಲಿ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಅವರು ಕೈಗಾರಿಕಾ ಸಚಿವರಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಆಹಾರ ಸಂಸ್ಕರಣೆ, ಕೈಗಾರಿಕೆ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ರಾಜ್ಯ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಕಲ್ಲಿದ್ದಲು, ನಾಗರಿಕ ವಿಮಾನಯಾನ ಮತ್ತು ಜವಳಿ ಖಾತೆ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.