ಕಾಸರಗೋಡು: ಗಡಿನಾಡಿನಲ್ಲಿ ಕನ್ನಡಪರ ಚಟುವಟಿಕೆಯನ್ನು ಅತ್ಯಂತ ಪ್ರೀತಿಯಿಂದ ನಡೆಸುವುದರ ಜತೆಗೆ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು ರಚನಾತ್ಮಕ ಕಾರ್ಯಗಳಿಗೆ ಸಾಕ್ಷಿಯಾದವರಲ್ಲಿ ಎಸ್.ವಿ ಭಟ್ ಒಬ್ಬರು ಎಂದು ಕಾಸರಗೋಡು ಸರ್ಕಾರಿ ಕಾಲೇಜು ನಿವೃತ್ತ ಪ್ರಾಧ್ಯಾಪಕಿ ಡಾ. ಯು. ಮಹೇಶ್ವರಿ ತಿಳಿಸಿದ್ದಾರೆ.
ಅವರು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಎಸ್.ವಿ ಭಟ್ ಸಂಸ್ಮರಣಾ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಮಾತನಾಡಿದರು. ಎಸ್.ವಿ ಭಟ್ ಒಬ್ಬರು ಅಪ್ರತಿಮ ಕನ್ನಡಾಭಿಮಾನಿಯಾಗಿದ್ದು, ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ಸದಾ ಬೆಂಗಾವಲಾಗಿ ನಿಲ್ಲುತ್ತಿದ್ದರು. ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕøತಿಯ ಮೇಲಾಗುವ ಯಾವುದೇ ರೀತಿಯ ದೌರ್ಜನ್ಯವನ್ನು ಪ್ರಬಲವಾಗಿ ಖಂಡಿಸುತ್ತಿದ್ದರು ಎಂದು ತಿಳಿಸಿದರು. ಕರ್ನಾಟಕ ಸಮಿತಿ ಅಧ್ಯಕ್ಷಷ ವಕೀಲ ಮುರಳೀಧರ ಬಳ್ಳಕ್ಕುರಾಯ ಅಧ್ಯಕ್ಷತೆ ವಹಿಸಿದ್ದರು. ಡಾ> ಪಿ. ಶ್ರೀಕೃಷ್ಣ ಭಟ್, ತೆಕ್ಕೇಕೆರೆ ಶಂಕರನಾರಾಯಣ ಭಟ್, ಕೆ. ನಾರಾಯಣ ಗಟ್ಟಿ ಕುಂಬಳೆ, ರಾಜೇಂದ್ರ ಕಲ್ಲೂರಾಯ ಎಡನೀರು, ಡಾ. ಜಿ. ರಆಜಗೋಪಾಲ, ರಾಧಾಕೃಷ್ಣ ಉಳಿಯತ್ತಡ್ಕ, ನಾರಾಯಣನ್ ಪೆರಿಯ, ರಾಮಮೂರ್ತಿ, ವಇ.ಬಿ ಕುಳಮರ್ವ, ಜಯನಾರಾಯಣ ತಾಯನ್ನೂರು, ಪ್ರಭಾಕರ ಅಗ್ಗಿತ್ತಾಯ, ಡಾ> ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ರಾಮಚಂದ್ರ ಭಟ್ ಧರ್ಮತ್ತಡ್ಕ, ಕೆ. ಸತ್ಯನಾರಾಯಣ ತಂತ್ರಿ, ಪ್ರೊ. ಎ.ಶ್ರೀನಾಥ್, ಮಹಾಲಿಂಗೇಶ್ವರ ಭಟ್, ವಇ. ಪ್ರದೀಪ್‍ಕುಮಾರ್ ಶೆಟ್ಟಿ ಬೇಳ ಮೊದಲಾದರು ಉಪಸ್ಥಿತರಿದ್ದರು. ಗಣೇಶ್ ಪ್ರಸಾದ್ ಪಾಣೂರು ಸ್ವಾಗತಿಸಿದರು. ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು. ಶೇಖರ್ ಶೆಟ್ಟಿ ವಂದಿಸಿದರು.