ನವದೆಹಲಿ: ವಾಹನ ಚಾಲನೆಯಲ್ಲಿ ನಿರ್ಲಕ್ಷ್ಯ ತೋರಿ, ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರ ಬೆಂಗಾವಲು ಪಡೆಯ ವಾಹನವೊಂದರ ಚಾಲಕನನ್ನು ಬಂಧಿಸಲಾಯಿತು. ವಿಚಾರಣೆಯ ಬಳಿಕ ಆತನನ್ನು ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿರುವುದರಿಂದ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ತಂಗಿದ್ದ ತಾಜ್ ಹೋಟೆಲ್‌ಗೆ ಅಮೆರಿಕ ಅಧ್ಯಕ್ಷರ ಬೆಂಗಾವಲು ಪಡೆಯಿಂದ ಬಂದ ಕಾರೊಂದು ಪ್ರವೇಶಿಸಿದ ನಂತರ ಈ ವಿದ್ಯಾಮಾನ ಜರುಗಿದೆ. ಕಾರನ್ನು ನೋಡುತ್ತಿದ್ದಂತೆ ಸ್ಥಳದಲ್ಲಿದ್ದ ಭದ್ರತಾ ಅಧಿಕಾರಿಗಳು ಎಚ್ಚರಿಕೆ ಸಂದೇಶ ರವಾನಿಸಿದರು.
ವಿಯೆಟ್ನಾಂಗೆ ತೆರಳಿದ ಬೈಡೆನ್
ಎರಡು ದಿನಗಳ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು ಮತ್ತು ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದರು. ನಿನ್ನೆ ನಡೆದ ಮೊದಲ ದಿನದ ಶೃಂಗ ಸಭೆಯಲ್ಲಿ ಭಾಗವಹಿಸಿದರು. ಇಂದು ಬೆಳಗ್ಗೆ ರಾಜ್ಘಾಟ್ನಲ್ಲಿರುವ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಬಳಿಕ ವಿಯೆಟ್ನಾಂಗೆ ತೆರಳಿದರು.