ನವದೆಹಲಿ: ನಟ ಮತ್ತು ಮಾಜಿ ಸಂಸದ ಸುರೇಶ್ ಗೋಪಿ ಅವರನ್ನು ಕೋಲ್ಕತ್ತಾದ ಸತ್ಯಜಿತ್ ರೇ ಇನ್ಸ್ಟಿಟ್ಯೂಟ್ ಆಫ್ ಫಿಲ್ಮ್ ಅಂಡ್ ಟೆಲಿವಿಷನ್ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.
ಸತ್ಯಜಿತ್ ರೇ ಇನ್ಸ್ಟಿಟ್ಯೂಟ್ ಆಫ್ ಫಿಲ್ಮ್ ಅಂಡ್ ಟೆಲಿವಿಷನ್ ಅನ್ನು 1995 ರಲ್ಲಿ ಸ್ಥಾಪಿಸಲಾಯಿತು.Éಸ್.ಆರ್.ಎಫ್.ಟಿ.ಐ ಎಂಬುದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಬೆಂಬಲಿತವಾದ ಸಂಸ್ಥೆಯಾಗಿದೆ.