ತಿರುವನಂತಪುರಂ: ರಾಜ್ಯದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುನ್ಸೂಚನೆ ಇದೆ. ಕೋಝಿಕ್ಕೋಡ್ ಮತ್ತು ವಯನಾಡಿನಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಮಧ್ಯ ಕೇರಳ ಮತ್ತು ಉತ್ತರ ಕೇರಳದಲ್ಲಿ ಮಳೆ ಬಿರುಸಿನಿಂದ ಮುಂದುವರಿದಿದೆ. ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.