ತಿರುವನಂತಪುರ: ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಕೇರಳದ ಕೊಚ್ಚಿ ಸಮೀಪದ ಆಲುವಾದಲ್ಲಿ ಗುರುವಾರ ನಡೆದಿದೆ.
ತಿರುವನಂತಪುರ: ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಕೇರಳದ ಕೊಚ್ಚಿ ಸಮೀಪದ ಆಲುವಾದಲ್ಲಿ ಗುರುವಾರ ನಡೆದಿದೆ.
ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ತಂದೆ, ತಾಯಿ ವಲಸೆ ಕಾರ್ಮಿಕರಾಗಿದ್ದಾರೆ.
'ಆರೋಪಿಯು ಬಾಲಕಿಯನ್ನು ಆಕೆಯ ಮನೆಯಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಬಾಲಕಿಯ ಬೊಬ್ಬೆ ಕೇಳಿ ಅಕ್ಕ ಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿದಾಗ ಆತ ಪರಾರಿಯಾಗಿದ್ದಾನೆ' ಎಂದು ಸ್ಥಳೀಯರು ಹೇಳಿದ್ದಾರೆ.
ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಸಂತ್ರಸ್ತ ಬಾಲಕಿಯು ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ವಿವರಿಸಿದ್ದಾರೆ.
ಜುಲೈ ತಿಂಗಳಲ್ಲಿ ಇದೇ ಪ್ರದೇಶದಲ್ಲಿ ವಲಸೆ ಕಾರ್ಮಿಕರೊಬ್ಬರ ಐದು ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಲಾಗಿತ್ತು.