ಬೆಂಗಳೂರು: ನಾಳೆಯಿಂದ (ಸೆ.18) ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು ಎಂಬ ತನ್ನ ಬೇಡಿಕೆಯನ್ನು ಕಾಂಗ್ರೆಸ್ ಭಾನುವಾರ ಪುನರುಚ್ಚರಿಸಿದೆ.
ಬೆಂಗಳೂರು: ನಾಳೆಯಿಂದ (ಸೆ.18) ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು ಎಂಬ ತನ್ನ ಬೇಡಿಕೆಯನ್ನು ಕಾಂಗ್ರೆಸ್ ಭಾನುವಾರ ಪುನರುಚ್ಚರಿಸಿದೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜೀವ್ ಗಾಂಧಿ ಅವರು 1989ರ ಮೇ ತಿಂಗಳಲ್ಲಿ ಪಂಚಾಯತ್ ಮತ್ತು ನಗರ ಸಂಸ್ಥೆಗಳಲ್ಲಿ ಮೂರನೇ ಒಂದು ಭಾಗದಷ್ಟು ಮೀಸಲಾತಿಗಾಗಿ ತಿದ್ದುಪಡಿ ಮಸೂದೆಗಳನ್ನು ಮೊದಲ ಬಾರಿಗೆ ಪರಿಚಯಿಸಿದರು. ನಂತರ ಪಿ.ವಿ.ನರಸಿಂಹ ರಾವ್ ಅವರು 1993ರ ಏಪ್ರಿಲ್‌ನಲ್ಲಿ ಮಸೂದೆಯನ್ನು ಮತ್ತೆ ಪರಿಚಯಿಸಿದರು. ಆಗ ಈ ಮಸೂದೆ ಕಾನೂನಾಗಿ ಮಾರ್ಪಟ್ಟಿತು ಎಂದು ಅವರು ಹೇಳಿದರು.
ಸದ್ಯ ಗ್ರಾಮ ಪಂಚಾಯಿತಿ ಮತ್ತು ನಗರ ಸಂಸ್ಥೆಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಚುನಾಯಿತ ಮಹಿಳಾ ಪ್ರತಿನಿಧಿಗಳಿದ್ದಾರೆ ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್‌ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಸೆಪ್ಟೆಂಬರ್ 18ರಿಂದ ನಡೆಯುವ ಅಧಿವೇಶನದಲ್ಲಿ ಈ ಮಸೂದೆಗೆ ಅನುಮೋದನೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.