ಕಾಸರಗೋಡು: ಕಳೆದ ಕೆಲವು ದಿವಸಗಳ ನಂತರ ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆಯಿರುವುದಾಗಿ ಕೇಂದ್ರ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕಾಸರಗೋಡು ಜಿಲ್ಲೆಯಲ್ಲಿ ಸೆ. 30ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು ನಗರದಲ್ಲಿ ಬಿರುಸಿನ ಮಳೆಗೆ ಚರಂಡಿ ತುಂಬಿಕೊಂಡು ರಸ್ತೆಯಲ್ಲಿ ನೀರು ಹರಿಯುವ ಸ್ಥಿತಿ ನಿರ್ಮಾಣವಾಗಿದೆ. ಷಟ್ಪಥ ನಿರ್ಮಾಣಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಚರಂಡಿವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.