ಇಡುಕ್ಕಿ: ಮಗಳು ಮಾರಾಟಕ್ಕಿದ್ದಾಳೆ ಎಂಬ ಫೇಸ್ಬುಕ್ ಪೋಸ್ಟ್ ವೈರಲ್ ಆದ ಬಳಿಕ ಸಾಕಷ್ಟು ಮಾಹಿತಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ಬೀಳುತ್ತಿದೆ. ಈ ಘಟನೆ ಥೋಡುಪುಳದಲ್ಲಿ ನಡೆದಿದೆ. ಬಾಲಕಿಯ ಮಲತಾಯಿ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಲ್ಲಿ ಕಂಡುಬಂದಿದೆ.
ಬಾಲಕಿಯ ತಂದೆಯ ಫೇಸ್ಬುಕ್ ಖಾತೆಯಿಂದ ಮಗಳು ಮಾರಾಟಕ್ಕಿದ್ದಾಳೆ ಎಂದು ಮಲತಾಯಿ ಪೋಸ್ಟ್ ಮಾಡಿದ್ದಾಳೆ. ಸೈಬರ್ ಸೆಲ್ ಸಹಾಯದಿಂದ ನಡೆಸಿದ ತನಿಖೆಯಲ್ಲಿ ಇದು ಪತ್ತೆಯಾಗಿದೆ. ಪತಿ ಜತೆಗಿನ ಜಗಳದ ಹಿನ್ನೆಲೆಯಲ್ಲಿ 11 ವರ್ಷದ ಬಾಲಕಿಯ ಮಲತಾಯಿ ಎರಡು ದಿನಗಳ ಹಿಂದೆ ಈ ಕೃತ್ಯ ಎಸಗಿದ್ದಾಳೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ.
ಮಾದಕ ವಸ್ತುಗಳ ಮಾರಾಟ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಾಲಕಿಯ ತಂದೆಯನ್ನು ಪೊಲೀಸರು ಮೊದಲು ಶಂಕಿಸಿದ್ದರು. ವಿಚಾರಣೆ ವೇಳೆ ಆತ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿರಲಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಬಳಿಕ ಸೈಬರ್ ಸೆಲ್ ಸಹಾಯದಿಂದ ಎಲ್ಲಿಂದ ಪೋಸ್ಟ್ ಮಾಡಲಾಗಿದೆ ಎಂದು ಪರಿಶೀಲಿಸಿದಾಗ, ಆಕೆಯ ಮಲತಾಯಿ ಎಂಬುದು ಗೊತ್ತಾಗಿದೆ. ಈ ಬಗ್ಗೆ ವಿಚಾರಿಸಿದಾಗ ಮೊದಲು ನಿರಾಕರಿಸಿದರೂ ಆನಂತರ ಆಕೆ ತಪ್ಪೊಪ್ಪಿಕೊಂಡಿದ್ದಾಳೆ.
ಈ ನಡುವೆ ಮಲತಾಯಿಗೆ ಆರು ತಿಂಗಳ ಮಗು ಇರುವುದರಿಂದ ಬಂಧಿಸುವುದು ಪೊಲೀಸರಿಗೆ ಸವಾಲಾಗಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಮಕ್ಕಳ ಕಲ್ಯಾಣ ಸಮಿತಿಯ ಸಲಹೆ ಕೇಳಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಗಳ ನಿರ್ದೇಶನದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಬಾಲಕಿ ಹಾಗೂ ಆಕೆಯ ಚಿಕ್ಕಮ್ಮ ಠಾಣೆಗೆ ಆಗಮಿಸಿ ಹೇಳಿಕೆ ನೀಡಿದ್ದಾರೆ. ತಾಯಿಯಿಂದ ಪರಿತ್ಯಕ್ತಳಾದ ಹುಡುಗಿ ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಆಶ್ರಯದಲ್ಲಿದ್ದಾಳೆ. ಬಾಲಕಿಯನ್ನು ಕೌನ್ಸೆಲಿಂಗ್‌ಗೆ ಒಳಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿ ಮಲತಾಯಿಗೆ ಆರು ತಿಂಗಳ ಮಗು ಇರುವುದರಿಂದ ಬಂಧಿಸುವುದು ಪೊಲೀಸರಿಗೆ ಸವಾಲಾಗಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಮಕ್ಕಳ ಕಲ್ಯಾಣ ಸಮಿತಿಯ ಸಲಹೆ ಕೇಳಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಗಳ ನಿರ್ದೇಶನದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಬಾಲಕಿ ಹಾಗೂ ಆಕೆಯ ಚಿಕ್ಕಮ್ಮ ಠಾಣೆಗೆ ಆಗಮಿಸಿ ಹೇಳಿಕೆ ನೀಡಿದ್ದಾರೆ. ತಾಯಿಯಿಂದ ಪರಿತ್ಯಕ್ತಳಾದ ಹುಡುಗಿ ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಆಶ್ರಯದಲ್ಲಿದ್ದಾಳೆ. ಬಾಲಕಿಯನ್ನು ಕೌನ್ಸೆಲಿಂಗ್‌ಗೆ ಒಳಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.