ಪೆರ್ಲ: ನಾಲಂದಾ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಹಿರಿಯ ಉಪನ್ಯಾಸಕ ಶಂಕರ ಖಂಡಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರ ಚೇಂಬರ್‍ನಲ್ಲಿ ನಡೆದ ಸಮಾರಂಭದಲ್ಲಿ ಶಂಕರ್ ಅಧಿಕಾರ ವಹಿಸಿಕೊಂಡರು.
ಕಾಲೇಜು ಆಡಳಿತ ಮಂಡಳಿಯ ಗೌರವಾಧ್ಯಕ್ಷ ಕಜಂಪಾಡಿ ಸುಬ್ರಹ್ಮಣ್ಯ ಭಟ್ , ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲಕರಾದ ಕೇಶವ ಶರ್ಮ.ಕೆ, ಕಾಮರ್ಸ್ ವಿಭಾಗದ ಮುಖ್ಯಸ್ಥ ಶ್ರೀನಿಧಿ.ಕೆ, ಕಾಮರ್ಸ್ ಪ್ರಾಧ್ಯಾಪಕ ಮನೋಜ್ ಕುಮಾರ್ ಪಿ, ಕಾರ್ಯಾಲಯ ಸಿಬ್ಬಂದಿ ರಾಧಾಕೃಷ್ಣ. ವೈ. ಎಸ್, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ.ಜಯಗೋವಿಂದ ಉಕ್ಕಿನಡ್ಕ ಸ್ವಾಗತಿಸಿದರು. ಆಡಳಿತ ಮಂಡಳಿಯ ಸದಸ್ಯ ಶಂಕರನಾರಾಯಣ ಖಂಡಿಗೆ ವಂದಿಸಿದರು.