ಮುಂಬೈ: ಮುಖ್ಯಮಂತ್ರಿ ಏಕನಾಥ್ ಸಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಔರಂಗಾಬಾದ್ ಮತ್ತು ಉಸ್ಮಾನಾಬಾದ್ ಜಿಲ್ಲೆಗಳ ಹೆಸರುಗಳನ್ನು ಕ್ರಮವಾಗಿ ಛತ್ರಪತಿ ಶಿವಾಜಿನಗರ ಮತ್ತು ಧಾರಾಶಿವ ಎಂದು ಮರುನಾಮಕರಣಗೊಳಿಸಿ ಆದೇಶ ಹೊರಡಿಸಿದೆ.
ಮುಂಬೈ: ಮುಖ್ಯಮಂತ್ರಿ ಏಕನಾಥ್ ಸಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಔರಂಗಾಬಾದ್ ಮತ್ತು ಉಸ್ಮಾನಾಬಾದ್ ಜಿಲ್ಲೆಗಳ ಹೆಸರುಗಳನ್ನು ಕ್ರಮವಾಗಿ ಛತ್ರಪತಿ ಶಿವಾಜಿನಗರ ಮತ್ತು ಧಾರಾಶಿವ ಎಂದು ಮರುನಾಮಕರಣಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ಜುಲೈನಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ಜಿಲ್ಲೆಗಳ ಹೆಸರನ್ನು ಬದಲಾಯಿಸುವ ಬಗ್ಗೆ ಒಪ್ಪಿಗೆ ಪಡೆಯಲಾಗಿತ್ತು.
'ಉದ್ಧವ್ ಠಾಕ್ರೆ ಮಾಡಲಿಕ್ಕೆ ಆಗದ ಕೆಲಸವನ್ನು ನಮ್ಮ ಸರ್ಕಾರವು ಸಚಿವ ಸಂಪುಟದ ಪೂರ್ಣ ಬಹುಮತದೊಂದಿಗೆ ಕಾನೂನಾತ್ಮಕವಾಗಿ ಮಾಡಿದೆ' ಎಂದು ಸಿಎಂ ಏಕನಾಥ್ ಸಿಂಧೆ ಮತ್ತು ಉಪಮುಖ್ಯಮಂತ್ರಿ ದೆವೇಂದ್ರ ಡ್ನವಿಸ್ ತಿಳಿಸಿದ್ದಾರೆ.