ಕೊಚ್ಚಿ: ಎರ್ನಾಕುಳಂ ಜನರಲ್ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಡಾ. ಮನೋಜ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾದೆ.
2018ರಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡಿದ ಮತ್ತೊಬ್ಬ ಮಹಿಳಾ ವೈದ್ಯೆ ದೂರು ನೀಡಿದ್ದಾರೆ. ಅವರು ಇಮೇಲ್ ಮೂಲಕ ತಮ್ಮ ದೂರನ್ನು ಸಲ್ಲಿಸಿದರು. ಸಾಮಾನ್ಯ ವೈದ್ಯಕೀಯ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಮನೋಜ್ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬುದು ದೂರು.
ಅವರು ಎರ್ನಾಕುಳಂ ಸೆಂಟ್ರಲ್ ಪೋಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಪೋಲೀಸರು ಮನೋಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುದಾರರ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ. 2019 ರಲ್ಲಿ ಎರ್ನಾಕುಳಂ ಜನರಲ್ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾಗಿದ್ದ ಡಾ.ಮನೋಜ್ ವಿರುದ್ದ ಈ ಹಿಂದೆ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಹೌಸ್ ಸರ್ಜರಿಯಲ್ಲಿ ಇಂಟರ್ನ್‍ಶಿಪ್ ಮಾಡುತ್ತಿದ್ದ ಮಹಿಳಾ ವೈದ್ಯರು ವೈದ್ಯರ ಮೇಲೆ ದೌರ್ಜನ್ಯದ ದೂರು ನೀಡಿದ್ದರು.
ಮಹಿಳಾ ವೈದ್ಯೆ ತಾನು ಎದುರಿಸಿದ ಲೈಂಗಿಕ ದೌರ್ಜನ್ಯವನ್ನು ವಿವರಿಸಿ ಫೇಸ್‍ಬುಕ್‍ನಲ್ಲಿ ಟಿಪ್ಪಣಿ ಬರೆದಿದ್ದರು. ಬಳಿಕ ಪೋಲೀಸರಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಮಧ್ಯ ಪ್ರವೇಶಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಬಳಿಕ ಮಹಿಳಾ ವೈದ್ಯರು ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದರು. ವೈದ್ಯ ಮನೋಜ್ ಪ್ರಸ್ತುತ ಅಲುವಾ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.