ಕೋಲ್ಕತ್ತ: ಹಿರಿಯ ನಾಗರಿಕರಿಗೆ ಫ್ಲ್ಯಾಟ್ ನೀಡುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದೆ, ನಟಿ ನುಸ್ರತ್ ಜಹಾನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು(ಇ.ಡಿ) ಸಮನ್ಸ್ ಜಾರಿ ಮಾಡಿದೆ.

ಕೋಲ್ಕತ್ತದ ಪೂರ್ವಭಾಗದ ಉಪನಗರದಲ್ಲಿ ಫ್ಲ್ಯಾಟ್ ನೀಡುವುದಾಗಿ ವಂಚಿಸಿರುವ ಪ್ರಕರಣ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್ 12ರಂದು ವಿಚಾರಣೆಗೆ ಹಾಜರಾಗುವಂತೆ ನುಸ್ರತ್ ಅವರಿಗೆ ಸೂಚಿಸಲಾಗಿದ್ದು, ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ.
ಉಪನಗರ ಪ್ರದೇಶದಲ್ಲಿ ತಮಗೆ ಫ್ಲ್ಯಾಟ್ ನೀಡುವುದಾಗಿ ಭರವಸೆ ನೀಡಿ ವಂಚಿಸಲಾಗಿದೆ ಎಂದು ಆರೋಪಿಸಿ ಹಿರಿಯ ನಾಗರಿಕರು ದೂರು ದಾಖಲಿಸಿದ್ದರು. ಈ ಸಂಬಂಧ ಇ.ಡಿ ತನಿಖೆ ನಡೆಸುತ್ತಿದೆ.
ಈ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ್ದ ಸಂಸದೆ ಜಹಾನ್ ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದರು. ವಂಚನೆಯ ಆರೋಪ ಕೇಳಿಬಂದಿರುವ ಕಂಪನಿಯ ನಿರ್ದೇಶಕಿ ಸ್ಥಾನಕ್ಕೆ ಮಾರ್ಚ್ 2017ರಲ್ಲೇ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದರು. ಆ ಕಂಪನಿಯಿಂದ ಸಾಲ ಪಡೆದಿದ್ದು ನಿಜ. ಆದರೆ, ಮೇ 2017ರಲ್ಲೇ ಅದನ್ನು ಮರುಪಾವತಿಸಿದ್ದೇನೆ ಎಂದು ಹೇಳಿದ್ದಾರೆ.