ಕುಂಬಳೆ: 2023-24ನೇ ಶೈಕ್ಷಣಿಕ ವರ್ಷದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವವು ಧರ್ಮತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಘಟನಾ ಸಮಿತಿ ರೂಪೀಕರಣ ಸಭೆ ಧರ್ಮತ್ತಡ್ಕ ಶಾಲಾ ಸಭಾಂಗಣದಲ್ಲಿ ನಾಳೆ(ಸೆ.23)ಬೆಳಿಗ್ಗೆ 10ಕ್ಕೆ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಯಶಸ್ವಿಗೊಳಿಸಬೇಕೆಂದು ಸಂಬಂಧಪಟ್ಟವರು ವಿನಂತಿಸಿದ್ದಾರೆ.