ಇಂಫಾಲ್ : ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಅಪರಿಚಿತ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಗೆ ಮತ್ತೆ ಮೂವರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂಫಾಲ್ : ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಅಪರಿಚಿತ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಗೆ ಮತ್ತೆ ಮೂವರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
'ಘಟನೆಗೆ ನಿರ್ದಿಷ್ಟ ಕಾರಣವೇನೆಂದು ಇನ್ನು ತಿಳಿದಿಲ್ಲ. ಇಂದು ಬೆಳಿಗ್ಗೆ ಸುಮಾರು 8.20ರ ಹೊತ್ತಿಗೆ ಕಂಗ್ಗುಯಿ ಪ್ರದೇಶದ ಇರೆಂಗ್ ಮತ್ತು ಕರಮ್ ವೈಫೇಯ್ ಗ್ರಾಮಗಳ ನಡುವೆ ಅಪರಿಚತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದು, ಮೂವರು ಹತರಾಗಿದ್ದಾರೆ.
ಸೆಪ್ಟೆಂಬರ್ 8 ರಂದು ತೆಂಗ್ನೌಪಾಲ್ ಜಿಲ್ಲೆಯ ಪಲ್ಲೆಲ್‌ನಲ್ಲಿ ನಡೆದ ಹಿಂಸಾಚಾರದ ಬೆನ್ನಲ್ಲೇ ಈ ಹತ್ಯೆ ನಡೆದಿದೆ. ಪಲ್ಲೆಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಹತ್ಯೆಯಾಗಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯದಗಳ ನಡುವಿನ ಜನಾಂಗೀಯ ಹಿಂಸಾಚಾರ ಮುಂದುವೆರೆದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಸರ್ಕಾರಗಳು ಪ್ರಯತ್ನಿಸುತ್ತಿವೆ. ಹಿಂಸಾಚಾರದಲ್ಲಿ ಇಲ್ಲಿಯವರೆಗೆ 160ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.