ನವದೆಹಲಿ: ಭಾರತದ ವೀಸಾ ಸೇವೆಯು ಕೆನಡಾ ಪ್ರಜೆಗಳಿಗೆ ಗುರುವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಖಾಲಿಸ್ತಾನ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿಕೆ ನೀಡಿದ್ದರು. ಇದರಿಂದಾಗಿ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮೂಡಿದ್ದು, ಈ ನಡುವೆಯೇ ವೀಸಾ ಸ್ಥಗಿತ ಕ್ರಮ ಕೈಗೊಳ್ಳಲಾಗಿದೆ.
ನಿಜ್ಜರ್ ಹತ್ಯೆ ವಿಚಾರವಾಗಿ ಉಭಯ ರಾಷ್ಟ್ರಗಳು ರಾಯಭಾರಿಗಳನ್ನು ಉಚ್ಚಾಟಿಸಿವೆ.
ಟ್ರುಡೊ ಹೇಳಿಕೆಯನ್ನು ತಿರಸ್ಕರಿಸಿರುವ ಭಾರತ ತಿರಸ್ಕರಿಸಿದ್ದು, 'ಇದು ಅಸಂಬದ್ಧ ಮತ್ತು ಅರ್ಥಹೀನ' ಎಂದು ಹೇಳಿದೆ.