ಮುಳ್ಳೇರಿಯ: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾರಣೆ ಅಂಗವಾಗಿ ಶಿಕ್ಷಕರ ದಿನವನ್ನು ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಈ ಸಂದರ್ಭ ಶಾಲೆಯ ನಿವೃತ್ತ ಹಿರಿಯ ಅಧ್ಯಾಪಕರಾದ ಪನೆಯಾಲ ವೆಂಕಟರಮಣ ಭಟ್ ಅವರನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು.
ಶಾಲಾ ಮುಖ್ಯ ಶೀಕ್ಷಕಿ ವಾರಿಜಾ ನೇರೋಳು ಅವರನ್ನು ಬೆಳ್ಳೂರು ಪ್ರಾಥಮಿಕ ಆರೋಗ್ಯಕೇಂದ್ರದ ಆರೋಗ್ಯಾಧಿಕಾರಿ ಗೌರವಿಸಿದರು. ಬೆಳ್ಳೂರು ಆರೋಗ್ಯಕೇಂದ್ರದ ಸಿಬ್ಬಂದಿ ಹಾಗೂ ಶಾಲಾ ಅಧ್ಯಾಪಕರು ಉಪಸ್ಥಿತರಿದ್ದರು. ಕಿರಿಯ ಪ್ರಾಥಮಿಕ ವಿಭಾಗದ ಅಧ್ಯಾಪಕರು ವಿಶೇಷ ಅಸೆಂಬ್ಲಿ ನಡೆಸಿಕೊಟ್ಟರು. ಮಕ್ಕಳಿಗೆ ಸಿಹಿತಿಂಡಿ ಹಂಚಲಾಯಿತು. ಶಿಕ್ಷಕ ದಿನಾಚರಣೆಯ ಅಂಗವಾಗಿ ವಿಶೇಷ ಚೇತನ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಲಾಯಿತು.