ಮಂಜೇಶ್ವರ: ಮಂಜೇಶ್ವರ ಗೋವಿಂದಪೈ ಸ್ಮಾರಕ ಸರ್ಕಾರಿ ಕಾಲೇಜಲ್ಲಿ 1ನೇ ವರ್ಷದ ಬಿಎಸ್‍ಸಿ ಅಂಕಿಅಂಶ(ಸ್ಟ್ಯಾಟಿಸ್ಟಿಕ್ಸ್) ತರಗತಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಸಿ-4, ಎಸ್‍ಟಿ-1 ಮತ್ತು ಇತರ ವಿಭಾಗಗಳಲ್ಲಿ ಕೆಲವು ಸೀಟುಗಳು ಖಾಲಿ ಇವೆ. ಅರ್ಹ ಆಸಕ್ತ ವಿದ್ಯಾರ್ಥಿಗಳು (ಕಣ್ಣೂರು ವಿಶ್ವವಿದ್ಯಾನಿಲಯದ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದವರು ಮತ್ತು ಸಲ್ಲಿಸದವರೂ) ಸೆಪ್ಟೆಂಬರ್ 11 ಮತ್ತು 13 ರಂದು ಮಧ್ಯಾಹ್ನ 3 ಗಂಟೆಯೊಳಗೆ ಕಾಲೇಜು ಕಚೇರಿಯಲ್ಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ 04998 272670 ಸಂಪರ್ಕಿಸಬಹುದು.