ತಿರುವನಂತಪುರಂ: ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ಮತ್ತು ನಾಳೆ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಲಾಗಿದೆ. ಇಂದು ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಡುಕ್ಕಿ, ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗುವ ಸಾಧ್ಯತೆಯಿದ್ದು, ವಿವಿಧ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಕೇಂದ್ರ ಹವಾಮಾನ ಇಲಾಖೆ ನಿನ್ನೆ ಈ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಏತನ್ಮಧ್ಯೆ, ನಿನ್ನೆ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಇಡುಕ್ಕಿ ಮತ್ತು ಎರ್ನಾಕುಳಂ ಜಿಲ್ಲೆಗಳÀ ಹಲವೆಡೆ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಿದೆ.