ತಿರುವನಂತಪುರಂ: ಪೂಜಾಪುರ ಕೇಂದ್ರ ಕಾರಾಗೃಹದಲ್ಲಿ ಭದ್ರತೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಕೊಲೆ ಪ್ರಕರಣದ ಆರೋಪಿಗಳಿಂದ ಮೊಬೈಲ್ ಪೋನ್ ಮತ್ತು ಸಿಮ್ ಕಾರ್ಡ್ ವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರತೆ ಹೆಚ್ಚಿಸುವಂತೆ ಡಿಐಜಿಗಳ ಸಭೆಯಲ್ಲಿ ಜೈಲು ಎಡಿಜಿಪಿ ಸೂಚಿಸಿದ್ದಾರೆ.
ಕಳೆದ ತಿಂಗಳು 27ರಂದು ಕೊಲೆ ಪ್ರಕರಣದ ಆರೋಪಿಗಳಿಂದ ಮೊಬೈಲ್ ಪೋನ್ ಹಾಗೂ ಎರಡು ಸಿಮ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಘಟನೆ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನವನ್ನು ನಿನ್ನೆಯಷ್ಟೇ ದಾಖಲಿಸಲಾಗಿದೆ. ಈ ಪೋನ್‍ಗೆ ಜೈಲು ಅಧಿಕಾರಿಗಳಿಂದ ಕರೆಗಳೂ ಬಂದಿರುವುದು ತನಿಖೆಯ ವೇಳೆ ಪತ್ತೆಯಾಗಿದೆ. ಈ ಪೋನ್‍ಗೆ 18 ಅಧಿಕಾರಿಗಳು ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.