ಬೆಂಗಳೂರು:ನಾಡಿನಲ್ಲಿ ಬರ ಪರಿಸ್ಥಿತಿ ತಲೆದೂರಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.
ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿಯ ಹಿತವನ್ನು ಕಾಪಾಡುವ ಜಾವಾಬ್ದಾರಿ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು, ರಾಜ್ಯದಲ್ಲಿ ಬರ ೋಷಣೆಯಾಗಿರುವ ಸಂದರ್ಭದಲ್ಲಿ ಅದ್ದೂರಿ ಸಮ್ಮೇಳನ ಆಚರಿಸುವುದು ಅರ್ಥ ಹೀನವಾಗಲಿದೆ.
ಬರ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಸರ್ಕಾರ ಮುಂದಿನ ವರ್ಷ ನಡೆಸಲು ತೀರ್ಮಾನ ಮಾಡಿರುವುದನ್ನು ಸ್ವಾಗತಿಸಿರುವ ಅವರು, ರಾಜ್ಯದಲ್ಲಿ ಬರಗಾಲ ತಲೆದೂರಿರುವುದರಿಂದ ಈ ಬಾರಿ ಮೈಸೂರು ದಸರಾ ಸೇರಿ ಎಲ್ಲ ಉತ್ಸವಗಳನ್ನು ಸಾಂಕೇತಿಕವಾಗಿ ಸರಳವಾಗಿ ಆಚರಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.