ಕುಂಬಳೆ: ವೈದ್ಯಕೀಯ ನೀಟ್ ಪರೀಕ್ಷೆಯಲ್ಲಿ ಉನ್ನತ ಅಂಕಗಳೊಂದಿಗೆ ತೇರ್ಗಡೆಗೊಂಡು ಇದೀಗ ಶಿವಮೊಗ್ಗ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿರುವ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಎಡನಾಡು-ಕಣ್ಣೂರು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಜಯಂತ ಪಾಟಾಳಿಯವರ ಪುತ್ರಿ ಶರಣ್ಯ.ಪಿ.ಜೆ ಅವರನ್ನು ಭಾರತೀಯ ಜನತಾ ಪಕ್ಷ ಕುಂಬಳೆ ಮಂಡಲ ಸಮಿತಿ ನೇತೃತ್ವದಲ್ಲಿ ಬಿಜೆಪಿ ಕೇರಳ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಶಾಲು ಹೊದಿಸಿ ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ನ್ಯಾಯವಾದಿ ಕೆ. ಶ್ರೀಕಾಂತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ರೈ, ಜಿಲ್ಲಾ ಉಪಾಧ್ಯಕ್ಷ ಸುಧಾಮ ಗೋಸಾಡ, ಉತ್ತರ ವಲಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಶೆಟ್ಟಿ ಪೂಕಟ್ಟೆ, ಜಿಲ್ಲಾ ಕಾರ್ಯದರ್ಶಿ ಮನುಲಾಲ್ ಮೇಲೋತ್, ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ, ಪ್ರಧಾನ ಕಾರ್ಯದರ್ಶಿಗಳಾದ ವಸಂತಕುಮಾರ್ ಮಯ್ಯ, ಕೆ.ಪಿ. ಅನಿಲ್ ಕುಮಾರ್, ಪುತ್ತಿಗೆ ಪಂಚಾಯತಿ ಸದಸ್ಯೆ ಕಾವ್ಯಶ್ರೀ, ಕಾಸರಗೋಡು ಮಂಡಲ ಪ್ರಧಾನ ಕಾರ್ಯದರ್ಶಿ ಸುಕುಮಾರ್ ಕುದುರೆಪ್ಪಾಡಿ, ಮಂಡಲ ಕಾರ್ಯದರ್ಶಿ ಸ್ವಾಗತ್ ಸೀತಾಂಗೋಳಿ, ಪುತ್ತಿಗೆ ಪಂಚಾಯತಿ ಸಮಿತಿ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಬಾಡೂರು, ಬೂತ್ ಸಮಿತಿ ಕಾರ್ಯಕರ್ತರಾದ ದಿವಾಕರ ಆಚಾರ್ಯ, ಯಜ್ಞೇಶ, ರೋಹಿತ್ ಕೆ.ಎಲ್. ಉಪಸ್ಥಿತರಿದ್ದರು.