ಕುಂಬಳೆ: ಆಲ್ ಕೇರಳ ಪೋಟೋಗ್ರಾಫರ್ಸ್ ಅಸೋಸಿಯೇಶನ್(ಎಕೆಪಿಎ) ಕುಂಬಳೆ ಘಟಕದ ಮಹಾಸಭೆ ಕುಂಬಳೆ ಮಾಧವ ಪೈ ಸಭಾಂಗಣದಲ್ಲಿ ಜರಗಿತು. ಕುಂಬಳೆ ವಲಯ ಅಧ್ಯಕ್ಷ ಸುರೇಶ್ ಆಚಾರ್ಯ ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ ಸಂಘಟನೆಯ ಚಟುವಟಿಕೆಗಳಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆಯಿದ್ದರೆ ಉತ್ತಮಕಾರ್ಯಗಳನ್ನು ಮಾಡಲು ಸಾಧ್ಯವಿದೆ. ವೃತ್ತಿಯ ಗೌರವವನ್ನು ಉಳಿಸಿಕೊಂಡು ಮುನ್ನಡೆಯಬೇಕು ಎಂದರು.
ಕುಂಬಳೆ ಘಟಕ ಅಧ್ಯಕ್ಷ ನವೀನ್ ಅಧ್ಯಕ್ಷತೆ ವಹಿಸಿದ್ದರು. ಎಕೆಪಿಎ ಜಿಲ್ಲಾ ಕೋಶಾಧಿಕಾರಿ ವೇಣು ವಿ.ವಿ., ಜಿಲ್ಲಾ ಉಪಾಧ್ಯಕ್ಷ ವಿಜಯನ್ ಶೃಂಗಾರ್, ಕುಂಬಳೆ ವಲಯ ಕಾರ್ಯದರ್ಶಿ ನಿತ್ಯಪ್ರಸಾದ್, ವಲಯ ಕೋಶಾಧಿಕಾರಿ ವೇಣುಗೋಪಾಲ ಬದಿಯಡ್ಕ, ಘಟಕ ಉಸ್ತುವಾರಿ ಉದಯ ಕಂಬಾರು ಮಾತನಾಡಿದರು. ಘಟಕ ಕಾರ್ಯದರ್ಶಿ ಪ್ರಮೋದ್ ಸ್ವಾಗತಿಸಿ, ಉಪಾಧ್ಯಕ್ಷ ರಾಮಚಂದ್ರ ವಂದಿಸಿದರು. ಈ ಸಂದಭರ್Àದಲ್ಲಿ ಹಿರಿಯ ಛಾಯಾಗ್ರಾಹಕರನ್ನು ಸನ್ಮಾನಿಸಲಾಯಿತು.