ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಎಂಡಿಎಂಎ ವಶಪಡಿಸಿಕೊಂಡಿರುವ ವಿದ್ಯಾನಗರ ಠಾಣೆ ಪೊಲೀಸರು ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ವಿದ್ಯಾನಗರ ಮುಟ್ಟತ್ತೋಡಿ ನಿವಾಸಿ ಖಮರುನ್ನೀಸಾ(42), ಅಹಮ್ಮದ್ ಶೆರೀಫ್(40) ಹಾಗೂ ಚೆರ್ಕಳ ಚೇರೂರು ನಿವಾಸಿ ಮಹಮ್ಮದ್ ಇರ್ಷಾದ್(36)ಬಂಧಿತರು.
ವಿದ್ಯಾನಗರ ಮುಟ್ಟತ್ತೋಡಿ ಸನಿಹ ಪಡುವಡ್ಕದಲ್ಲಿ ವಾಹನ ತಪಾಸಣೆ ನಡೆಸುವ ಮಧ್ಯೆ ಆಗಮಿಸಿದ ಕಾರನ್ನು ತಪಾಸಣೆ ನಡೆಸಿದಗ 3.99ಗ್ರಾಂ ಎಂಡಿಎಂಎ ಪತ್ತೆಹಚ್ಚಲಾಗಿದೆ. ಮಾರಾಟಕ್ಕಾಗಿ ಎಂಡಿಎಂಎ ಸಆಗಿಸುತ್ತಿರುವ ಬಗ್ಗೆ ಆರೋಪಿಗಳು ಮಾಹಿತಿ ನೀಡಿದ್ದಾರೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಘಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.