ನವದೆಹಲಿ: 'ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ಅಲ್ಲದೆ, ಸಂವಿಧಾನದ ಬಗ್ಗೆ ತಮಗೆ ನಿಷ್ಠೆ ಇದೆ' ಎಂದು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸುವಂತೆ ನ್ಯಾಷನಲ್ ಕಾನ್ಪರೆನ್ಸ್ ನಾಯಕ ಹಾಗೂ ಸಂಸದ ಮೊಹಮ್ಮದ್ ಅಕ್ಬರ್ ಲೋನ್ ಅವರಿಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅಧ್ಯಕ್ಷತೆಯ ಸಾಂವಿಧಾನಿಕ ಪೀಠವು ಸೋಮವಾರ ನಡೆಸಿತು.
'ಸಂವಿಧಾನದ 32ನೇ ವಿಧಿಯಡಿ ಅರ್ಜಿದಾರರು (ಲೋನ್) ನ್ಯಾಯಾಲಯಕ್ಕೆ ಸಾಂವಿಧಾನಿಕ ಪರಿ ಹಾರ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ, ಅವರು ಸಂವಿಧಾನಕ್ಕೂ ವಿಧೇ ಯರಾಗಿರಬೇಕು' ಎಂದು ಚಂದ್ರಚೂಡ್ ಹೇಳಿದರು.
2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಲ್ಲಿ ಲೋನ್ ಅವರು 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದರು. ಇದಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸಲು ಅವರು ನಿರಾಕರಿಸಿದ್ದರು.