ನವದೆಹಲಿ: ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನ ಅಂಗವಾಗಿ ನಾಳೆ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆಯನ್ನು ಸೋನಿಯಾ ಗಾಂಧಿ ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜ್ವರದಿಂದಾಗಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಸ್ತಾಪಿಸಬಹುದಾದ ವಿಷಯಗಳು, ಪಕ್ಷದ ಯೋಜನೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಶೇಷ ಸಂಸತ್ ಅಧಿವೇಶನದ ಕಾರ್ಯತಂತ್ರದ ಕುರಿತು ಚರ್ಚಿಸಲು INDIA ಮೈತ್ರಿಕೂಟದ ಸಂಸದರ ಸಭೆಯನ್ನೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಕರೆದಿದ್ದಾರೆ. ಸೆಪ್ಟೆಂಬರ್ 18-22ರವರೆಗೆ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ. ಆದರೆ ವಿಶೇಷ ಅಧಿವೇಶನದ ಅಜೆಂಡಾ ಇನ್ನೂ ಬಹಿರಂಗವಾಗಿಲ್ಲ.