ಬದಿಯಡ್ಕ: ಸೇವಾಭಾರತಿ ನೀರ್ಚಾಲು ಇದರ ವತಿಯಿಂದ ಕಾಸರಗೋಡು ಸರ್ಕಾರಿ ಜನರಲ್ ಆಸ್ಪತ್ರೆಯ ಸಹಭಾಗಿತ್ವದೊಂದಿಗೆ ಸೆ.24 ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ರ ವರೆಗೆ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಲಿರುವುದು. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸೇವಾಭಾರತಿ ಪ್ರಕಟಣೆಯಲ್ಲಿ ತಿಳಿಸಿದೆ.
ರಕ್ತದಾನಿಗಳು ಪರಿಗಣಿಸಬೇಕಾದ ವಿಷಯಗಳು:
1. ಆರೋಗ್ಯವಂತ ವ್ಯಕ್ತಿ 3 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು .....
2. ರಕ್ತದಾನಿಗಳು ಹಿಂದಿನ ದಿನ ಕನಿಷ್ಠ 8 ಗಂಟೆಗಳ ನಿದ್ದೆ ಮಾಡಬೇಕು ....
3. ಮದ್ಯ ಸೇವಿಸಿದ 24 ಗಂಟೆಗಳ ಒಳಗೆ ರಕ್ತದಾನ ಮಾಡಬಾರದು .....
4. ಆ್ಯಂಟಿಬಯೋಟಿಕ್ ಮತ್ತು ನೋವು ನಿವಾರಕಗಳನ್ನು ಸೇವಿಸಿದವರು ರಕ್ತದಾನ ಮಾಡುವಂತಿಲ್ಲ....
5. ಜ್ವರ ಅಥವಾ ಇತರ ದೈಹಿಕ ಕಾಯಿಲೆ ಇರುವವರು ರಕ್ತದಾನ ಮಾಡಬಾರದು .....
6. ಹಚ್ಚೆ ಹಾಕಿಸಿಕೊಂಡವರು, ಜಾಂಡೀಸ್, ಅಥವಾ ಶಸ್ತ್ರಚಿಕಿತ್ಸೆಗೆ ಒಳಗಾದವರು ಒಂದು ವರ್ಷದವರೆಗೆ ರಕ್ತದಾನ ಮಾಡಬಾರದು ......
7. ನಿಯಮಿತವಾಗಿ ಔಷಧಿಗಳನ್ನು ಸೇವಿಸುವವರಿಗೆ ಮತ್ತು ಮಧುಮೇಹ ಅಥವಾ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ರಕ್ತದಾನ ಮಾಡಲು ಸಾಧ್ಯವಿಲ್ಲ.