ತಿರುವನಂತಪುರಂ: ಇಂದು ರಾಜ್ಯದ ವಿವಿಧಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಲವಾದ ಗಾಳಿ ಮತ್ತು ಎತ್ತರದ ಅಲೆಗಳ ಸಾಧ್ಯತೆಯಿಂದಾಗಿ ಮೀನುಗಾರರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಎಚ್ಚರಿಕೆಯ ಪ್ರಕಾರ, ಗಾಳಿಯ ವೇಗ ಗಂಟೆಗೆ 55 ಕಿ.ಮೀ.ಇರಲಿದೆ.
ಇಂದು ಮತ್ತು ನಾಳೆ ರಾಜ್ಯದಲ್ಲಿ ಮಳೆ, ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಬಂಗಾಳದ ಕರಾವಳಿ ಮತ್ತು ಪಕ್ಕದ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಗಂಟೆಗೆ 40 ರಿಂದ 45 ಕಿಮೀ ವೇಗದಲ್ಲಿ ಮತ್ತು ಸಾಂದರ್ಭಿಕವಾಗಿ 55 ಕಿಮೀ ವೇಗದಲ್ಲಿ ಪ್ರತಿಕೂಲ ಹವಾಮಾನದೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೀನುಗಾರರಿಗೆ ಹಾಗೂ ಕರಾವಳಿ ತೀರದ ನಿವಾಸಿಗಳಿಗೆ ಎಚ್ಚರಿಕೆ ನೀಡಿದೆ.
ಮೀನುಗಾರರು ದೋಣಿಗಳು ಮತ್ತು ಇತರ ಸಲಕರಣೆಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಮತ್ತು ಸಮುದ್ರತೀರಕ್ಕೆ ಪ್ರವಾಸ ಮತ್ತು ಸಮುದ್ರದಲ್ಲಿನ ಚಟುವಟಿಕೆಗಳನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಎಚ್ಚರಿಕೆಯ ಹೊರತಾಗಿಯೂ ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ವ್ಯತ್ಯಯವಿಲ್ಲ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.