HEALTH TIPS

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತ

             ರಾಯಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

               ಚಿಂತಗುಫ ಪೊಲೀಸ್ ಠಾಣೆ ವ್ಯಾಪ್ತಿಯ ತಡ್‌ಮೆಟ್ಲಾ ಮತ್ತು ದುಲೆಡ್ ಗ್ರಾಮಗಳ ನಡುವಿನ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಕೇಂದ್ರ ಮೀಸಲು ಪಡೆಯ 223ನೇ ಬೆಟಾಲಿಯನ್‌ ಮತ್ತು ಜಿಲ್ಲಾ ಮೀಸಲು ಪಡೆಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

                ಈ ಘಟನೆಯಲ್ಲಿ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

              ಮೃತ ನಕ್ಸಲರನ್ನು ಸೋಧಿ ದೇವ ಮತ್ತು ರವಾ ದೇವ ಎಂದು ಗುರುತಿಸಲಾಗಿದೆ. ಇವರು ಜಗರ್ಗುಂಡಾ ಅರಣ್ಯ ಪ್ರದೇಶದಲ್ಲಿ ಸಕ್ರಿಯರಾಗಿದ್ದರು. ಇವರ ತಲೆಗೆ ತಲಾ ₹ 1ಲಕ್ಷ ಬಹುಮಾನ ಫೋಷಣೆ ಮಾಡಲಾಗಿತ್ತು.

                  ಘಟನಾ ಸ್ಥಳದಲ್ಲಿ ಡಬಲ್ ಬ್ಯಾರೆಲ್ ರೈಫಲ್ ಮತ್ತು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries