ಕಾಸರಗೋಡು: ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಚಟುವಟಿಕೆಗಳ ಮೌಲ್ಯಮಾಪನ ನಡೆಸುವ ನಿಟ್ಟಿನಲ್ಲಿ ಪುಲ್ಲೂರು ಪೆರಿಯ ಗ್ರಾಮ ಪಂಚಾಯಿತಿಗೆ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಭೇಟಿ ನೀಡಿದರು.
ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಯೋಜನಾ ಪರಿಶೀಲನಾ ಸಭೆ ನಡೆಸಲಾಯಿತು. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‍ನಲ್ಲಿ ಒಳಗೊಂಡ ಕೆಲವೊಂದು ಯೋಜನೆಗಳನ್ನು ಶೀಘ್ರ ಪೂರ್ತಿಗೊಳಿಸಲು ನಿರ್ದೇಶಿಸಲಾಯಿತು. ಪಂಚಾಯಿತಿಯಲ್ಲಿ ಪರಿಶೀಲನಾ ಸಭೆ ಬಳಿಕ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಕೆ.ಅರವಿಂದನ್, ಉಪಾಧ್ಯಕ್ಷೆ ಎ.ಕಾತ್ರ್ಯಾಯಿನಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶಾಹಿದಾ ರಶೀದ್, ಕೆ.ಚಂದ್ರನ್, ವಿ.ವಿ.ಸುಮಾ, ವಿವಿಧ ಇಲಾಖೆ ಪ್ರತಿನಿಧಿಗಳು ಉಪಸ್ಥಿತರಿದ್ದರು.