ಕಾಸರಗೋಡು: ವಿವಿಧ ಆರೋಗ್ಯ ಸೇವೆಗಳನ್ನು ಒಂದೇ ಸೂರಿನಡಿ ತರಲು ಮತ್ತು ಸಾರ್ವಜನಿಕರಿಗೆ ಸೇವೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಿಸಲು ಜಾರಿಗೆ ತಂದಿರುವ 'ಆಯುಷ್ಮಾನ್ ಭವ' ಕಾರ್ಯಕ್ರಮದ ಜಿಲ್ಲಾಮಟ್ಟದ ಉದ್ಘಾಟನಾ ಸಮಾರಂಭ ಜಿಲ್ಲಾ ವೈದ್ಯಕೀಯ ಕಛೇರಿಯಲ್ಲಿ ಜರುಗಿತು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಸಮಾರಂಭ ಉದ್ಘಾಟಿಸಿದರು. ಕಾಞಂಗಾಡು ನಗರಸಭಾ ಉಪಾಧ್ಯಕ್ಷ ಬಿಲ್ಟೆಕ್ ಅಬ್ದುಲ್ಲ ಅಧ್ಯಕ್ಷತೆ ವಹಿಸಿದ್ದರು. ಚೆಮ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಫೈಜಾ ಅಬೂಬಕ್ಕರ್, ಚೆಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಾದರ್ ಬದರಿಯಾ, ರಾಷ್ಟ್ರೀಯ ಆರೋಗ್ಯ ಮಿಷನ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಡಾ.ರಿಜಿತ್ ಕೃಷ್ಣನ್, ಜಿಲ್ಲಾ ಟಿಬಿ ಅಧಿಕಾರಿ ಡಾ.ಮುರಳೀಧರ ನಲ್ಲೂರಾಯ, ಜಿಲ್ಲಾ ಪರಿಶಿಷ್ಟ ಪಂಗಡ ಅಭಿವೃದ್ಧಿ ಅಧಿಕಾರಿ ಎಂ.ಮಲ್ಲಿಕಾ ಉಪಸ್ಥಿತರಿದ್ದರು. ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ.ಎ.ವಿ.ರಾಮದಾಸ್ ಸ್ವಾಗತಿಸಿದರು. ಕಾಞಂಗಾಡು ಜಿಲ್ಲಾ ಆಸ್ಪತ್ರೆ ಪ್ರಭಾರಿ ಅಧೀಕ್ಷಕ ಡಾ.ಪಿ.ವಿನೋದ್ ಕುಮಾರ್ ವಂದಿಸಿದರು.
ಈ ಸಂದರ್ಭ ಆಯುಷ್ಮಾನ್‍ಭವ ರಾಷ್ಟ್ರೀಯ ಕಾರ್ಯಕ್ರಮದ ಉದ್ಘಾಟನೆಯ ನೇರ ಪ್ರಸಾರವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಅಂಗಾಂಗ ದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ಥಳೀಯಾಡಳಿತ ಸಂಸ್ಥೆಗಳಿಗೆ ಪರಿಚಯಿಸಿದ ಜಿಲ್ಲೆಯ ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶದ ಕಿಟ್‍ಗಳನ್ನು ಗರಿಷ್ಠ ಸಂಖ್ಯೆಯಲ್ಲಿ ವಿತರಿಸಿದ ಚೆಮ್ಮನಾಡು ಹಾಗೂ ಚೆಂಗಳ ಗ್ರಾಮ ಪಂಚಾಯಿತಿಗೆ 'ನಿಕ್ಷಯ ಮಿತ್ರ'ಪ್ರಶಸ್ತಿ ವಿತರಿಸಲಾಯಿತು.