ಮಂಜೇಶ್ವರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಂಜೇಶ್ವರ ಯೋಜನಾ ವ್ಯಾಪ್ತಿಯ ಸುಂಕದಕಟ್ಟೆ ವಲಯದ ಶ್ರೀ ನಾಗಬ್ರಹ್ಮ ಯುವಕ ಮಂಡಲ ಅರಿಬೈಲು ಕಡಂಬಾರು ಇದರ ಸಮುದಾಯ ಭವನ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ರಾಜಶ್ರೀ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷ ರೂಪಾಯಿಯ ಮಂಜೂರಾತಿ ಪತ್ರವನ್ನು ಯುವಕ ಮಂಡಲದ ಸಮಿತಿ ಪದಾದಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಮಂಜೇಶ್ವರ ತಾಲೂಕಿನ ಶ್ರೀ.ಕ್ಷೇ. ಧ. ಗ್ರಾ. ಯೋಜನಾಧಿಕಾರಿ ಶಶಿಕಲ ಸುವರ್ಣ ಮಂಜೂರಾತಿ ಪತ್ರ ಹಸ್ತಾಂತರಿಸಿದರು. ಈ ಸಂದರ್ಭ ಜಿಲ್ಲಾ ಜನಜಾಗೃತಿ ವೇದಿಕೆ ಕಾಸರಗೋಡು ವಲಯ ಅಧ್ಯಕ್ಷರಾದ ಡಾ! ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲು, ಜಿಲ್ಲಾ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಅಶ್ವತ್ ಪೂಜಾರಿ ಲಾಲ್‍ಬಾಗ್, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಹರೀಶ್ ಶೆಟ್ಟಿ ಕಡಂಬಾರು, ವರ್ಕಾಡಿ ಗ್ರಾಮ ಪಂಚಾಯಿತಿ ಸದಸ್ಯ ರಾಜ್ ಕುಮಾರ್, ಸುಂಕದಕಟ್ಟೆ ಒಕ್ಕೂಟದ ಅಧ್ಯಕ್ಷರಾದ ದಿನೇಶ್, ಕಾರ್ಯದರ್ಶಿ ಸುಧಾಕರ್, ತಲಪಾಡಿ ವಲಯದ ಮೇಲ್ವಿಚಾರಕ ಭಾಸ್ಕರ್ ಸುಂಕದಕಟ್ಟೆ, ವಲಯದ ಮೇಲ್ವಿಚಾರಕ ಕೃಷ್ಣಪ್ಪ, ಸೇವಾ ಪ್ರತಿನಿಧಿ ಅಶ್ವಿನಿ, ಒಕ್ಕೂಟದ ಪದಾಧಿಕಾರಿಗಳು, ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.