ಸಮರಸ ಚಿತ್ರಸುದ್ದಿ: ಬದಿಯಡ್ಕ: ಅಗಲ್ಪಾಡಿ ಮಾರ್ಪನಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಜರಗಿದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಿಂದ ವೈಭವದ ಮೆರವಣಿಗೆ ನಡೆಯಿತು. ಶ್ರೀಕೃಷ್ಣ ರಾಧೆಯರ ವೇಷದಲ್ಲಿ 100ಕ್ಕೂ ಹೆಚ್ಚು ಮಂದಿ ಮಕ್ಕಳು ಕಂಗೊಳಿಸಿದರು. ಮೆರವಣಿಗೆಯಲ್ಲಿ ಪಾಂಚಜನ್ಯ ಕುಣಿತ ಭಜನಾ ತಂಡ ಗಮನಸೆಳೆಯಿತು.