ನವದೆಹಲಿ: ಭಾರತೀಯ ದಂಡ ಸಂಹಿತೆಯ(ಐಪಿಸಿ) ಅಡಿಯಲ್ಲಿ ವಸಾಹತುಶಾಹಿ ಕಾಲದ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕನಿಷ್ಠ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಂವಿಧಾನ ಪೀಠಕ್ಕೆ ಶಿಫಾರಸು ಮಾಡಿದೆ.

ಸಂಸತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳನ್ನು ಮರುಪರಿಶೀಲಿಸುವ ಪ್ರಕ್ರಿಯೆಯಲ್ಲಿರುವುದರಿಂದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸದಂತೆ ಕೇಂದ್ರ ಮಾಡಿದ್ದ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ತಿರಸ್ಕರಿಸಿದೆ.
ಕನಿಷ್ಠ ಐವರು ನ್ಯಾಯಾಧೀಶರ ಪೀಠ ರಚನೆಗೆ ಆಡಳಿತಾತ್ಮಕ ನಿರ್ಧಾರವನ್ನು ತೆಗೆದುಕೊಳ್ಳಲು ಸಿಜೆಐ ಅವರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಗೆ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ನಿರ್ದೇಶನ ನೀಡಿತು.
ಭಾರತೀಯ ದಂಡ ಸಂಹಿತೆಯ ನಿಬಂಧನೆಗಳನ್ನುನ್ನು ಮರುಪರಿಶೀಲಿಸುವ ಕುರಿತು ಸಮಾಲೋಚನೆ ನಡೆಯುತ್ತಿದೆ ಎಂದು ಕೇಂದ್ರವು ಹೇಳಿದ್ದರಿಂದ ಮೇ 1ರಂದು ಈ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿತ್ತು.
ಆಗಸ್ಟ್ 11ರಂದು, ವಸಾಹತುಶಾಹಿ ಕಾಲದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಮಹತ್ವದ ಕ್ರಮದಲ್ಲಿ ಕೇಂದ್ರವು ಐಪಿಸಿ, ಸಿಆರ್‌ಪಿಸಿ ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್ ಅನ್ನು ಬದಲಿಸಲು ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಅಲ್ಲದೆ, ದೇಶದ್ರೋಹದ ಕಾನೂನನ್ನು ರದ್ದುಗೊಳಿಸಿ ಅಪರಾಧದ ವ್ಯಾಪಕ ವ್ಯಾಖ್ಯಾನದೊಂದಿಗೆ ಹೊಸ ನಿಬಂಧನೆಗಳನ್ನು ಮುಂದಿಟ್ಟಿತ್ತು.