ಲಖನೌ: ಉತ್ತರಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ (ಇಎಂಯು) ರೈಲು ಏಕಾಏಕಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.
ಲಖನೌ: ಉತ್ತರಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ (ಇಎಂಯು) ರೈಲು ಏಕಾಏಕಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.
ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದಿದ್ದರು. ಹಾಗಾಗಿ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಶಕುರ್ ಬಸ್ತಿಯಿಂದ ರೈಲು ರಾತ್ರಿ 10:49ಕ್ಕೆ ಮಥುರಾ ನಿಲ್ದಾಣಕ್ಕೆ ಬಂದಿದ್ದು, ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಇದ್ದಕ್ಕಿದ್ದಂತೆ ರೈಲು ಪ್ಲಾಟ್‌ಫಾರ್ಮ್‌ಗೆ ಏರಿದೆ. ಘಟನೆಯಿಂದ ಇತರೆ ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಶ್ರೀವಾಸ್ತವ ಹೇಳಿದ್ದಾರೆ.